ಕೊಪ್ಪಳ: ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಕಿಮ್ಸ್ ಹೊರಗುತ್ತಿಗೆ ಲ್ಯಾಬ್ ಟೆಕ್ನಿಷಿಯನ್ಸ್ ದಿಢೀರ್ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಸುಮಾರು 60 ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ಗಳು ಕೆಲಸ ಮಾಡುತ್ತಿದ್ದೇವೆ. ಈಗ ಕೊರೊನಾ ಕೆಲಸದಲ್ಲಿ ತೊಡಗಿದ್ದೇವೆ. ಆದರೆ, ಲ್ಯಾಬ್ ಟೆಕ್ನಿಷಿಯನ್ಗಳಿಗೆ ಮಾಸ್ಕ್, ಗ್ಲೌಸ್, ಪಿಪಿಇ ಕಿಟ್, ಸ್ಯಾನಿಟೈಜರ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಲ್ಲ. ಅಲ್ಲದೆ ಕೊರೊನಾ ಪಾಸಿಟಿವ್ ಬಂದ ಲ್ಯಾಬ್ ಟೆಕ್ನಿಷಿಯನ್ಗಳಿಗೆ ಸೂಕ್ತ ಚಿಕ್ಸಿತೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅಲ್ಲದೆ ಪ್ರಾಥಮಿಕ ಸಂಪರ್ಕ ಹೊಂದಿರುವ ಲ್ಯಾಬ್ ಟೆಕ್ನಿಷಿಯನಗಳಿಗೆ ಕ್ವಾರಂಟೈನ್ ಸೌಕರ್ಯ ನೀಡಿಲ್ಲ ಎಂದು ದೂರಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.