ಕೊಪ್ಪಳ: ಅಭಿವೃದ್ಧಿ ದೃಷ್ಟಿಯಿಂದ ಕೆ.ರಾಜಶೇಖರ ಹಿಟ್ನಾಳ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಪ್ರತಿಕ್ರಿಯಿಸಿದ್ದಾರೆ.
ಜಿಪಂ ನೂತನ ಅಧ್ಯಕ್ಷರ ಆಯ್ಕೆ ಬಳಿಕ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಪಕ್ಷದ ಎಲ್ಲಾ ಮುಖಂಡರು, ಜಿಲ್ಲಾ ಪಂಚಾಯತ್ನ ಬಹುತೇಕ ಎಲ್ಲಾ ಸದಸ್ಯರು ಒಮ್ಮತದಿಂದ ಕೆ. ರಾಜಶೇಖರ್ ಹಿಟ್ನಾಳ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಇಂದು 23 ಸದಸ್ಯರು ರಾಜಶೇಖರ್ ಅವರ ಪರವಾಗಿ ಬೆಂಬಲ ನೀಡಿದ್ದಾರೆ ಎಂದರು.
ಇನ್ನು ಉಪಾಧ್ಯಕ್ಷರ ಆಯ್ಕೆಯಲ್ಲಿಯೂ 23 ಜನ ಸದಸ್ಯರು ಬೆಂಬಲಿಸಿದ್ದರು. ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.