ಕೊಪ್ಪಳ: ನಗರ ಸೇರಿದಂತೆ ಜಿಲ್ಲಾದ್ಯಂತ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿದ್ದು, ತುಂತುರು ಮಳೆಯಾಗುತ್ತಿದೆ.
ನಿನ್ನೆ ಸಂಜೆಯಿಂದ ಮೋಡ ಕವಿದ ವಾತಾವರಣವಿದ್ದು, ಕೊಪ್ಪಳ, ಭಾಗ್ಯನಗರದಲ್ಲಿ ಬೆಳಗ್ಗೆ ಸುಮಾರು ಐದು ಗಂಟೆಯಿಂದಲೇ ಮಳೆ ಪ್ರಾರಂಭವಾಗಿದೆ. ಈ ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದು, ಬೆಳೆಗಳಿಗೆ ರೋಗಬಾಧೆ ಕಾಡುವ ಸಾಧ್ಯತೆ ಇದೆ.
ಇನ್ನು ಜಿಲ್ಲಾದ್ಯಂತ ತುಂತುರು ಮಳೆ ಹಾಗೂ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿರುವುದರಿಂದ ಮಲೆನಾಡಿನ ಅನುಭವ ನೀಡುತ್ತಿದೆ.