ಕೊಪ್ಪಳ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿಂದು ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ, 51 ವರ್ಷದ ಪುರುಷ ಹಾಗೂ 65 ವರ್ಷದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ 51 ವರ್ಷದ ಪುರುಷ (P-24910)ಜುಲೈ. 5 ರಂದು ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ -19 ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ 65 ವರ್ಷದ ಸೋಂಕಿತ ವ್ಯಕ್ತಿ (P-28568) ಸಂಜೆ ಮೃತಪಟ್ಟಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ, ಈ ವ್ಯಕ್ತಿ ಜುಲೈ 7 ರಂದು ಕೋವಿಡ್ -19 ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಸೋಂಕಿತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.