ಕೊಪ್ಪಳ: ಜಿಲ್ಲೆಯಲ್ಲಿ ಒಟ್ಟು 84 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 21 ಜನರು ಸೋಂಕುಮುಕ್ತರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 62 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
36 ಐಎಲ್ಐ (ILI) ಕೇಸ್ ಕ್ವಾರಂಟೈನ್ ಮಾಡಲಾಗಿದ್ದು ಈವರೆಗೆ ಒಟ್ಟು 3,466 ಜನರ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 3,059 ಜನರ ವರದಿ ನೆಗೆಟಿವ್ ಬಂದಿದ್ದು, 40 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನುಳಿದ 367 ಜನರ ವರದಿ ಬರಬೇಕಿದೆ.
ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕೊರೊನಾ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪೂಲ್ಡ್ ಟೆಸ್ಟಿಂಗ್ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.