ಕೊಪ್ಪಳ: ಜಿಲ್ಲೆಯಲ್ಲಿ ಇಂದು 94 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,142 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 30, ಕೊಪ್ಪಳ ತಾಲೂಕಿನಲ್ಲಿ 38, ಕುಷ್ಟಗಿ ತಾಲೂಕಿನಲ್ಲಿ 09 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಒಟ್ಟು 94 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು ನಾಲ್ಕು ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 251 ಜನ ಮೃತಪಟ್ಟಿದ್ದಾರೆ. ಇಂದು 489 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 10,619 ಜನರು ಗುಣಮುಖರಾಗಿದ್ದಾರೆ.
1099 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.