ETV Bharat / state

ಅಂತೂ 6 ತಿಂಗಳ ನಂತರ ಬಂತು ಫಲಿತಾಂಶ: 'ಕೈ'​​ಗೆ ಒಲಿದ ಕೊಪ್ಪಳ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಲತಾ ಗವಿಸಿದ್ದಪ್ಪ ಚಿನ್ನೂರು ಹಾಗೂ ಉಪಾಧ್ಯಕ್ಷರಾಗಿ ಜರೀನಾಬೇಗಂ ಅರಗಂಜಿ ಅವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆಯನ್ನು ಕಳೆದ 2020ರ ಅಕ್ಟೋಬರ್ 29 ರಂದು ನಡೆಸಲಾಗಿತ್ತು.

ನಗರಸಭೆ
ನಗರಸಭೆ
author img

By

Published : Apr 27, 2021, 3:28 PM IST

Updated : Apr 27, 2021, 5:27 PM IST

ಕೊಪ್ಪಳ: ಕಳೆದ 6 ತಿಂಗಳ ಹಿಂದೆ ನಡೆದಿದ್ದ ಕೊಪ್ಪಳ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು ಪ್ರಕಟಿಸಿದ್ದಾರೆ.

ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಲತಾ ಗವಿಸಿದ್ದಪ್ಪ ಚಿನ್ನೂರು ಹಾಗೂ ಉಪಾಧ್ಯಕ್ಷರಾಗಿ ಜರೀನಾಬೇಗಂ ಅರಗಂಜಿ ಅವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆಯನ್ನು ಕಳೆದ 2020ರ ಅಕ್ಟೋಬರ್ 29 ರಂದು ನಡೆಸಲಾಗಿತ್ತು.

ಅಂತೂ 6 ತಿಂಗಳ ನಂತರ ಬಂತು ಫಲಿತಾಂಶ

ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಯನ್ನು ನ್ಯಾಯಾಲಯದಿಂದ ತಡೆಹಿಡಿಯಲಾಗಿತ್ತು. ಅಲ್ಲದೇ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ನ್ಯಾಯಾಲಯದ ಸೂಚನೆಯಂತೆ 6 ತಿಂಗಳ ಬಳಿಕ ಇಂದು ಅಧಿಕೃತವಾಗಿ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಯ ಫಲಿತಾಂಶ ಪ್ರಕಟಿಸಲಾಗಿದ್ದು, ಈ ಮೂಲಕ ಕೊಪ್ಪಳ ನಗರಸಭೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಮಡಿಲಿಗೆ ಬಿದ್ದಂತಾಗಿದೆ.

Last Updated : Apr 27, 2021, 5:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.