ಕುಷ್ಡಗಿ (ಕೊಪ್ಪಳ): ರಸ್ತೆಯ ಹಂಪ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು, ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಕುಷ್ಟಗಿ ಹೆದ್ದಾರಿಯಲ್ಲಿ ಜರುಗಿದೆ.
ಬೆಂಗಳೂರು ಜಿಲ್ಲೆಯ ನೆಲಮಂಗಲ ಅಗ್ನಿಶಾಮಕ ಠಾಣೆಯಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಶಿವಾನಂದ ಸಿದ್ರಾಮಪ್ಪ ಬ್ಯಾಕೋಡ್ (28) ಮೃತ ದುರ್ದೈವಿ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಜಲಪುರ ಗ್ರಾಮದ ಶಿವಾನಂದ ಬ್ಯಾಕೋಡ್ ಅವರ ಪತ್ನಿಗೆ ಹೆಣ್ಣು ಮಗುವಾದ ಖುಷಿಯಲ್ಲಿ ರಜೆ ಹಾಕಿ ಮನೆಗೆ ಮರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಇಂದು ನೆಲಮಂಗಲದಿಂದ ಜಲಪುರಕ್ಕೆ ಕುಷ್ಟಗಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಇಲ್ಲಿನ ಅಗ್ನಿಶಾಮಕ ಠಾಣೆಯ ಎದುರಿನ ಹೆದ್ದಾರಿಯಲ್ಲಿ ಹಂಪ್ಸ್ ಗೆ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.