ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ತಾವರಗೇರಾ ಕಿತ್ತೂರು ಚನ್ನಮ್ಮ ವಸತಿ ನಿಲಯದ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟಿದೆ. ಈ ಹಿನ್ನೆಲೆ ಆಕೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಟಗಿ ಮೂಲದ ವಿದ್ಯಾರ್ಥಿನಿ ತಾವರಗೇರಾ ಕಿತ್ತೂರು ಚನ್ನಮ್ಮ ವಸತಿ ನಿಲಯದಲ್ಲಿ 8ನೇ ತರಗತಿ ಓದುತ್ತಿದ್ದಾಳೆ. ಈ ವಿದ್ಯಾರ್ಥಿನಿ ಡಿ.8 ರಂದು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮಾಹಿತಿ ಇದೆ. ಕಳೆದ ಡಿ.12ರಂದು 90 ವಿದ್ಯಾರ್ಥಿನಿಯರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಇವರಲ್ಲಿ 89 ವಿದ್ಯಾರ್ಥಿನಿಯರ ವರದಿ ನೆಗೆಟಿವ್ ಬಂದಿತ್ತು. ಆದರೆ ಒಬ್ಬ ವಿದ್ಯಾರ್ಥಿನಿಯ ವರದಿ ಪಾಸಿಟಿವ್ ಬಂದಿದೆ.
ಕೊರೊನಾ ದೃಢಪಟ್ಟ ವಿದ್ಯಾರ್ಥಿನಿಗೆ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ. ಪರೀಕ್ಷೆ ವೇಳೆ ಪಾಸಿಟಿವ್ ಬಂದಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರು ತಿಳಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಕೊರೊನಾ ಸೋಂಕಿತರಿಗಿಂತ ಚೇತರಿಸಿಕೊಂಡವರೇ ಹೆಚ್ಚು: 113ಕ್ಕೇರಿದ ಒಮಿಕ್ರಾನ್ ಕೇಸ್ಗಳು