ಕುಷ್ಟಗಿ: ಪಟ್ಟಣದ ಮುಖ್ಯ ರಸ್ತೆ ಬಸವೇಶ್ವರ ವೃತ್ತ ದಿಂದ ಮಾರುತಿ ವೃತ್ತದವರೆಗಿನ ದ್ವಿಪಥ ರಸ್ತೆಯಲ್ಲಿ, ಸಾಲು ಸಾಲು ಗುಂಡಿಗಳ ದರ್ಶನವಾಗಿದ್ದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ರಸ್ತೆಯ ತುಂಬೆಲ್ಲ ಗುಂಡಿಗಳಾಗಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯವೇ ಅವ್ಯವಸ್ಥೆಗೆ ಕಾರಣವಾಗಿದೆ. ಮಳೆಯಾದಾಗ ನೀರು ಗುಂಡಿಗಳಲ್ಲಿ ತುಂಬಿಕೊಳ್ಳುತ್ತಿದ್ದು, ಸವಾರರಿಗೆ ಇದರಲ್ಲಿ ಸಂಚರಿಸುವುದು ದುಸ್ತರವೆನಿಸಿದೆ. ಈ ಗುಂಡಿಗಳಿಗೆ ಮಣ್ಣು ಹಾಕುತ್ತಿದ್ದು, ಡಾಂಬರ್ ಹಾಕಿ ಸರಿಪಡಿಸುವ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.