ETV Bharat / state

ಗ್ರಾ.ಪಂ. ಚುನಾವಣೆ ದೀರ್ಘಾವಧಿ ಕರ್ತವ್ಯದಿಂದ ಬಿಡುಗಡೆಗೊಳಿಸಿ: ಪ್ರೌಢಶಾಲಾ ಶಿಕ್ಷಕರ ಮನವಿ - appeal to DC

ರಾಜ್ಯ ಚುನಾವಣಾ ಆಯೋಗದ ಆದೇಶದ ಹೊರತಾಗಿಯೂ ಪ್ರೌಢಶಾಲಾ ಶಿಕ್ಷಕರನ್ನು ದೀರ್ಘಾವಧಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು, ಇದನ್ನು ಪುನರ್ ಪರಿಶೀಲಿಸುವಂತೆ ಕುಷ್ಟಗಿ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಗ್ರೇಡ್ 2 ತಹಶೀಲ್ದಾರ ಹೆಚ್. ವಿಜಯಾ ಮುಂಡರಗಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

teachers appeal to DC
ಪ್ರೌಢಶಾಲಾ ಶಿಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ
author img

By

Published : Oct 11, 2020, 8:10 AM IST

ಕುಷ್ಟಗಿ: ಪ್ರಸಕ್ತ ಗ್ರಾಮ ಪಂಚಾಯತ್​ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆಗೆ ಮಾತ್ರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸುವಂತೆ ಕುಷ್ಟಗಿ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಗ್ರೇಡ್ 2 ತಹಶೀಲ್ದಾರ ಹೆಚ್. ವಿಜಯಾ ಮುಂಡರಗಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮದ ನಿರಂತರ ಕಲಿಕಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ವೇಳೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೆ ಮಕ್ಕಳ ಶಿಕ್ಷಣಕ್ಕೆ ಅನಾನುಕೂಲವಾಗುವ ಸಾಧ್ಯತೆಯಿದೆ.

ರಾಜ್ಯ ಚುನಾವಣಾ ಆಯೋಗದ ಆದೇಶದ ಹೊರತಾಗಿಯೂ ದೀರ್ಘಾವಧಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು, ಇದನ್ನು ಪುನರ್ ಪರಿಶೀಲಿಸುವಂತೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕಾಡಗಿಮಠ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.