ಕೊಪ್ಪಳ: ಕಳೆದ ವಾರ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದ ಹೊರಗುತ್ತಿಗೆ ಲ್ಯಾಬ್ ಟೆಕ್ನಿಷಿಯನ್ಸ್ ಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆ ಇಂದು ಮತ್ತೆ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಕಂಪ್ಯೂಟರ್ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್ಸ್ ಸೇರಿ 107 ಜನ ಹೊರಗುತ್ತಿಗೆ ಆಧಾರಿತ ಸಿಬ್ಬಂದಿ ಇದ್ದೇವೆ. ಪ್ರತಿ ತಿಂಗಳು ನಮಗೆ ಸಂಬಳ ಪಾವತಿಯಾಗೇಕು. ಕಳೆದ ಮೂರು ವರ್ಷಗಳಿಂದ ಬರಬೇಕಾದ ಅರಿಯರ್ಸ್ ನೀಡಬೇಕು. ಈಗಾಗಲೇ ಲ್ಯಾಬ್ ಟೆಕ್ನಿಷಿಯನ್ಗಳಿಗೆ ಕೊರೊನಾ ತಗುಲಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕಿತ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಿಲ್ಲ. ಕೆಲಸದ ಸಂದರ್ಭದಲ್ಲಿ ಸರಿಯಾದ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಿಮ್ಸ್ ನಿರ್ದೇಶಕ ವೈಜನಾಥ್ ಇಟಗಿ ಸ್ಥಳಕ್ಕೆ ಭೇಟಿ ನೀಡಿ, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಈ ರೀತಿಯಾಗಿ ಕೆಲಸ ಬಿಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ. ಪ್ರತಿ ತಿಂಗಳೂ ನಾವು ಸಂಬಳವನ್ನು ಪಾವತಿಸತ್ತಿದ್ದೇವೆ. ಆದರೆ, ಅರಿಯರ್ಸ್ ವಿಷಯ ನಮ್ಮ ವ್ಯಾಪ್ತಿಯಲ್ಲಿ ಇಲ್ಲ. ಹೀಗಾಗಿ, ಜನರ ಆರೋಗ್ಯ ರಕ್ಷಣೆಯಲ್ಲಿ ನಾವು ನೀವು ಸೇರಿಕೊಂಡು ಕೆಲಸ ಮಾಡಬೇಕಿದೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಡುವಂತೆ ಪ್ರತಿಭಟನಾ ನಿರತರ ಮನವೊಲಿಸಲು ಪ್ರಯತ್ನಿಸಿದರು.