ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮವನ್ನ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲಿ ಎಂದು ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಮುಂದೆ ಬರಬೇಕು. ಶೈಕ್ಷಣಿಕಾಗಿ ಮುಂದುವರೆದಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶಾಲಾ ಸಂಸತ್‍ಗೆ ಆಯ್ಕೆಯಾಗಿದ್ದ ವಿದ್ಯಾರ್ಥಿ ಪ್ರತಿನಿಧಿಗಳು ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಮಹಾಂತಮ್ಮ ಪೂಜಾರಿ, ಬಿಇಒ ಚನ್ನಬಸಪ್ಪ ಮಗ್ಗದ ಸೇರಿದಂತೆ ಪ್ರಮಖರು ಉಪಸ್ಥಿತರಿದ್ದರು.