ಗಂಗಾವತಿ: ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕಿನ ಬಸವನ ದುರ್ಗದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಹಾಗೂ ಕೆಲ ಯುವಕರು ಪಂಜಿನ ಮೆರವಣಿಗೆ ನಡೆಸಿ ಕೋವಿಡ್ 19 ವಿರುದ್ಧ ಜಾಗೃತಿ ಮೂಡಿಸಿದರು.
ಆನೆಗೊಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಈ ಗ್ರಾಮದಲ್ಲಿ ಜಾಥಾ ನಡೆಸಿದ ಪಂಚಾಯತ್ ರಾಜ್ ಇಲಾಖೆಯ ನೌಕರರು, ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ತಾಲೂಕು ಪಂಚಾಯಿತಿ ಇಒ ಮೋಹನ್ ನೇತೃತ್ವದಲ್ಲಿ ಈ ಜಾಗೃತಿ ಜಾಥಾ ನಡೆಯಿತು.