ಕೊಪ್ಪಳ: ಜಿಲ್ಲೆಯ ಎಪಿಎಂಸಿ ಬಳಿಯ ಶ್ರೀ ಸಾಯಿ ಟ್ರೇಡರ್ಸ್ ಬಾರ್ನಲ್ಲಿ ಕಳ್ಳತನವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾರ್ನ ಹಿಂಬಾಗಿಲು ಮುರಿದು ಮದ್ಯ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿದ್ದಾರೆ.

ಕೊರೊನಾ ಭೀತಿಯಿಂದ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ನಗರದಲ್ಲಿ ಎಲ್ಲ ಮದ್ಯದ ಅಂಗಡಿಗಳು ಬಂದ್ ಆಗಿವೆ. ಮದ್ಯ ಸಿಗದಿರುವ ಕಾರಣಕ್ಕೆ ಕುಡುಕರು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
