ಕೊಪ್ಪಳ : ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಎರಡನೇ ಹಂತದ ಲಾಕ್ಡೌನ್ ಹೇರಲಾಗಿದ್ದು, ರೈತನೋರ್ವ ತನ್ನ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಓಜಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಓಜಿನಹಳ್ಳಿ ಗ್ರಾಮದ ಚಿನ್ನಪ್ಪ ಮೇಟಿ ಎಂಬ ರೈತ ತನ್ನ ಮೂರು ಎಕರೆ ಪ್ರದೇಶದಲ್ಲಿ ಒಂದು ಲಕ್ಷ ರೂಪಾಯಿ ಖರ್ಚು ಮಾಡಿ ಎಲೆಕೋಸು ಬೆಳೆ ಬೆಳೆದಿದ್ದರು. ಆದರೆ ಲಾಕ್ಡೌನ್ ಮತ್ತೆ ವಿಸ್ತರಣೆಯಾಗಿ ಬೆಳೆ ಮಾರಾಟಕ್ಕೆ ತೊಂದರೆಯಾದ ಹಿನ್ನೆಲೆಯಲ್ಲಿ ಇಂದು ಟ್ರ್ಯಾಕ್ಟರ್ ಮೂಲಕ ಬೆಳೆಯನ್ನು ನಾಶ ಮಾಡಿದ್ದಾರೆ.
ರೈತ ಸಾಲ ಸೋಲ ಮಾಡಿ ಬೆಳೆ ಬೆಳೆದಿದ್ದರು. ಎಲೆಕೋಸು ಮಾರಾಟವಾಗಿದ್ದರೆ ರೈತ ಸಾಕಷ್ಟು ಆದಾಯ ಗಳಿಸುತ್ತಿದ್ದರು. ಆದರೀಗ ರೈತರು ಆತಂಕ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.