ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಸ್ಫೋಟಕಗಳನ್ನು ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಹಶೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ನಡುರಾತ್ರಿ ದಾಳಿ ನಡೆಸಲಾಗಿದೆ. ಈ ವೇಳೆ ಲಕ್ಷಾಂತರ ರೂ. ಮೌಲ್ಯದ ಎಂಟು ನೂರಕ್ಕೂ ಹೆಚ್ಚು ಕಲ್ಲುಗಳು, ಎರಡು ಟ್ರ್ಯಾಕ್ಟರ್ ಮತ್ತು ಒಂದು ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಪ್ರಕರಣ ಪರಿಶೀಲಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಮತ್ತೊಬ್ಬನ ಪತ್ನಿ ಜೊತೆ ವಿವಾಹೇತರ ಸಂಬಂಧ: ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಬ್ಇನ್ಸ್ಪೆಕ್ಟರ್ ಸಸ್ಪೆಂಡ್