ಕೊಪ್ಪಳ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ನಡುಗೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಕೊಪ್ಪಳ ಹೊರವಲಯದ ಹೊಸಪೇಟೆ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಕೊಪ್ಪಳದಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನುಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.