ಕೊಪ್ಪಳ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ತ್ವರಿತ ವಿಲೇವಾರಿ (ಪೋಕ್ಸೋ) ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ.
ಆರೋಪಿ ಶ್ರೀನಾಥ ಬೋವಿ ಎಂಬಾತನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸತ್ರ ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶ ಶಂಕರ್ ಎಂ. ಜಾಲವಾದಿ ಆದೇಶಿಸಿದ್ದಾರೆ.
ಕೊಪ್ಪಳ ತಾಲೂಕಿನ ಹುನುಮನಹಳ್ಳಿ ಗ್ರಾಮದ ಶ್ರೀನಾಥ ಬೋವಿ ಅದೇ ಗ್ರಾಮದ ಬಾಲಕಿಯನ್ನು ಪ್ರೀತಿಸುವುದಾಗಿ, ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ಆಗಸ್ಟ್ 2, 2016 ರಂದು ಬಾಲಕಿಯನ್ನು ಮಂತ್ರಾಲಯಕ್ಕೆ ಅಪಹರಿಸಿಕೊಂಡು ಹೋಗಿ ಅಲ್ಲಿನ ಲಾಡ್ಜ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಕುರಿತು ಕೊಪ್ಪಳ ಗ್ರಾಮೀಣ ಠಾಣೆ ಯಲ್ಲಿ ದೂರು ದಾಖಲಾಗಿತ್ತು.
ತನಿಖೆ ನಡೆಸಿದ್ದ ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಭೀಮಣ್ಣ ಸೂರಿ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದೆ. 25 ಸಾವಿರ ರೂಪಾಯಿ ದಂಡದ ಮೊತ್ತದಲ್ಲಿ 20 ಸಾವಿರ ರೂಪಾಯಿಗಳನ್ನು ಬಾಧಿತ ಬಾಲಕಿಗೆ ನೀಡುವಂತೆ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.
ಓದಿ : ಹೆಚ್ಚುತ್ತಿರುವ ಕೊರೊನಾ ಪ್ರಕರಣ.. ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೂಳಿಸಿ ರಾಮನಗರ ಡಿಸಿ!