ಕೊಪ್ಪಳ: ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೇವರಾಜ ಅರಸು ಕಾಲೋನಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಮೃತ ಬಸವರಾಜನ ಮಗಳು ತಿಂಗಳ ಹಿಂದೆ ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ಪೋಷಕರು ಕರೆದರೂ ಆಕೆ ವಾಪಸ್ ಬಂದಿರಲಿಲ್ಲ. ಇದರಿಂದ ಮನನೊಂದು ಬಸವರಾಜ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.