ETV Bharat / state

ಅಕ್ರಮ ಮರಳು ಸಾಗಾಣಿಕೆ ಕಡಿವಾಣಕ್ಕೆ ಕೊಪ್ಪಳ ಎಸ್ಪಿಯ ಮಾಸ್ಟರ್ ಪ್ಲಾನ್!

author img

By

Published : Jul 18, 2019, 2:07 AM IST

Updated : Jul 18, 2019, 6:13 AM IST

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯ ಮೇಲೆ ಹದ್ದಿನ ಕಣ್ಣಿಟ್ಟು ತಿಂಗಳಿಗೆ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕನಿಷ್ಠ 10 ಕೇಸ್‍ಗಳನ್ನಾದರೂ ದಾಖಲಿಸುವಂತೆ ಕೊಪ್ಪಳ ಎಸ್ಪಿ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಎಸ್ಪಿ

ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಗಟ್ಟಲು ಶತಾಯಗತಾಯ ಪ್ರಯತ್ನ ಮಾಡಿತ್ತಿದ್ದರೂ ಈ ಅಕ್ರಮಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಇದನ್ನು ತಡೆಗಟ್ಟಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಒಂದು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕಾದವರಲ್ಲಿಯೇ ಕೆಲವರು ಇದಕ್ಕೆ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕಾಗಿ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತಿಂಗಳಿಗೆ ಕನಿಷ್ಠ 10 ಪ್ರಕರಣವನ್ನಾದರೂ ದಾಖಲು ಮಾಡಲು ಕೊಪ್ಪಳ ಎಸ್ಪಿ, ಪೊಲೀಸ್ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಲು ಕೊಪ್ಪಳ ಎಸ್ಪಿಯ ಮಾಸ್ಟರ್ ಪ್ಲಾನ್

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ರಾಜಶೇಖರ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಪೊಲೀಸರ ಬಗ್ಗೆ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ ಟ್ರ್ಯಾಕ್ಟರ್​ಗಳ ಮೇಲೆ ಮಾತ್ರ ಕೇಸ್ ದಾಖಲು ಮಾಡುತ್ತಿದ್ದಾರೆ, ದೊಡ್ಡ ಟಿಪ್ಪರ್​ಗಳ ಮೇಲೆ ಪೊಲೀಸರು ಯಾಕೆ ಕೇಸ್‍ಗಳನ್ನು ದಾಖಲಿಸುತ್ತಿಲ್ಲ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಪ್ರಶ್ನಿಸಿದ್ದರು. ಈ ಆರೋಪದಿಂದ ಮುಕ್ತವಾಗಲು ಎಸ್ಪಿ ರೇಣುಕಾ ಸುಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದು, ಕಟ್ಟುನಿಟ್ಟಿನ ಆದೇಶವೊಂದನ್ನು ಹೊರಡಿಸಿದ್ದಾರೆ.

SP ORDER
ಆದೇಶ ಪ್ರತಿ

ಈ ಆದೇಶದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯ ಮೇಲೆ ಹದ್ದಿನ ಕಣ್ಣಿಟ್ಟು ತಿಂಗಳಿಗೆ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕನಿಷ್ಠ 10 ಕೇಸ್‍ಗಳನ್ನಾದರೂ ದಾಖಲಿಸುವಂತೆ ಉಲ್ಲೇಖಿಸಿದ್ದು, ಈ ಕುರಿತು ಅಧಿಕಾರಿಗಳಿಗೆ ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೇ ಕೇವಲ ಟ್ರ್ಯಾಕ್ಟರ್​​ಗಳ ಮೇಲೆ ಕೇಸ್ ಹಾಕಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಿಸಲು ಟ್ರ್ಯಾಕ್ಟರ್​​​ಗಳ ಜೊತೆಗೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ಟಿಪ್ಪರ್​ಳ ಮೇಲೆಯೂ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

Intro:Body:ಕೊಪ್ಪಳ:-ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಗಟ್ಟಲು ಶತಾಯಗತಾಯ ಪ್ರಯತ್ನ ಮಾಡಿದರೂ ಸಹ ಕಡಿವಾಣ ಬಿದ್ದಿಲ್ಲ. ಹೀಗಾಗಿ, ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರು ಒಂದು ಮಾಸ್ಟರ್ ಪ್ಲಾನ್ ಮಾಡಿದ್ದು ತಿಂಗಳಿಗೆ ಕನಿಷ್ಠ 10 ಕೇಸನ್ನಾದರೂ ದಾಖಲು ಮಾಡಲು ಪೊಲೀಸ್ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಹೌದು...., ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ತಡೆಗಟ್ಟಲು ನಾನಾ ರೀತಿಯಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆ ಪ್ರಯತ್ನ ಮಾಡಿದರೂ ಸಹ ಕಡಿವಾಣ ಬೀಳುತ್ತಿಲ್ಲ. ಕಡಿವಾಣ ಹಾಕಬೇಕಾದವರಲ್ಲಿಯೇ ಕೆಲವರು ಈ ಅಕ್ರಮ ಮರಳು ದಂಧೆಗೆ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ರಾಜಶೇಖರ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಭೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಪೊಲೀಸರ ಬಗ್ಗೆ ಕೆಲ ಶಾಸಕರು ಅಸಮಧಾನ ವ್ಯಕ್ತಪಡಿಸಿದ್ದರು. ಕೇವಲ ಟ್ರಾಕ್ಟರ್‍ಗಳ ಮೇಲೆ ಮಾತ್ರ ಕೇಸ್ ದಾಖಲು ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಟಿಪ್ಪರ್‍ಗಳ ಮೇಲೆ ಪೊಲೀಸರು ಕೇಸ್‍ಗಳನ್ನು ದಾಖಲಿಸುತ್ತಿಲ್ಲ ಎಂದು ಆರೋಪಿಸಿದ್ದರು. ಈ ಆರೋಪದಿಂದ ಮುಕ್ತವಾಗಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರು, ಮಾಸ್ಟರ್ ಪ್ಲಾನ್ ಮಾಡಿದ್ದು ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಆದೇಶವೊಂದನ್ನು ಇತ್ತೀಚಿಗೆ ಹೊರಡಿಸಿದ್ದಾರೆ. ಈ ಆದೇಶದಲ್ಲಿ ಅವರು ಉಲ್ಲೇಖಿಸಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ/ಸಾಗಾಣಿಕೆಯ ಮೇಲೆ ಹದ್ದಿನ ಕಣ್ಣಿಟ್ಟು ತಿಂಗಳಿಗೆ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕನಿಷ್ಠ 10 ಕೇಸ್‍ಗಳನ್ನಾದರೂ ದಾಖಲಿಸುವಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಅಧಿಕಾರಿಗಳಿಗೆ ಮೌಖಿಕ ಸೂಚನೆಯನ್ನು ಸಹ ನೀಡಿದ್ದಾರೆ. ಅಲ್ಲದೆ, ಕೇವಲ ಟ್ರಾಕ್ಟರ್ ಗಳ ಮೇಲೆ ಕೇಸ್ ಹಾಕಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಿಸಲು ಟ್ರಾಕ್ಟರ್‍ಗಳ ಜೊತೆಗೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ಟಿಪ್ಪರ್‍ಗಳ ಮೇಲೆಯೂ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಬೈಟ್1:- ರೇಣುಕಾ ಸುಕುಮಾರ್, ಜಿಲ್ಲಾ
ಪೊಲೀಸ್ ವರಿಷ್ಠಾಧಿಕಾರಿ.

ಆದರೆ, ಅವಶ್ಯವಾಗಿರುವ ಮರಳನ್ನು ಜನರು ತಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದರೂ ಅಂತಹವರ ಮೇಲೆಯೂ ಪೊಲೀಸರು ಕೇಸು ದಾಖಲು ಮಾಡುತ್ತಿದ್ದಾರೆ. ಟ್ರಾಕ್ಟರ್ ಹಾಗೂ ಎತ್ತಿನ ಬಂಡಿಯಲ್ಲಿ ಮರಳು ತೆಗೆದುಕೊಂಡು ಹೋಗುತ್ತಿರುವವರ ಮೇಲೆಯೂ ಕೇಸ್ ದಾಖಲಿಸುತ್ತಾರೆ. ಆದರೆ, ಟಿಪ್ಪರ್‍ಗಳನ್ನು ಬಿಡುತ್ತಾರೆ ಎಂದು ಇತ್ತೀಚಿಗೆ ನಡೆದ ಸಭೆಯಲ್ಲಿ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಅವರು ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದರು. ಅದಾದ ಬಳಿಕ ಈಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರು ಹೊರಡಿಸಿರುವ ಆದೇಶ ಮತ್ತಷ್ಟು ಚರ್ಚೆಗೆ ಇಂಬು ನೀಡಿದೆ. ತಿಂಗಳಿಗೆ ಕನಿಷ್ಠ 10 ಕೇಸ್‍ಗಳನ್ನಾದರೂ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲು ಮಾಡಬೇಕು ಎಂಬ ಎಸ್ಪಿ ಅವರ ಆದೇಶದಂತೆ ಈ ಬಾರಿ ಯಾವ ಯಾವ ವಾಹನಗಳ ಮೇಲೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಕಾನ್ಸನ್ಟ್ರೇಟ್ ಮಾಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
-------------
Conclusion:
Last Updated : Jul 18, 2019, 6:13 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.