ETV Bharat / state

ಏಪ್ರಿಲ್​ 16ರಂದು ಅಂಜನಾದ್ರಿಯಲ್ಲಿ ಸಭೆ: ನಾಲ್ವರು ಸಚಿವರು ಭಾಗಿ - Gangavathi

ಅಂಜನಾದ್ರಿ ದೇಗುಲವನ್ನು ಜಾಗತಿಕ ಮಟ್ಟದ ಧಾರ್ಮಿಕ ತಾಣವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತಾಗಿ ಚರ್ಚಿಸಿ ನೀಲ ನಕಾಶೆ ಸಿದ್ಧಪಡಿಸಲು ಏಪ್ರಿಲ್​ 16ರಂದು ಸಭೆ ಕರೆಯಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನಾಲ್ವರು ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Gangavathi
ಅಂಜನಾದ್ರಿ
author img

By

Published : Apr 10, 2021, 1:44 PM IST

ಗಂಗಾವತಿ: ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ತಾಣ ಅಂಜನಾದ್ರಿ ದೇಗುಲವನ್ನು ಜಾಗತಿಕ ಮಟ್ಟದ ಧಾರ್ಮಿಕ ತಾಣವಾಗಿಸುವ ನಿಟ್ಟಿನಲ್ಲಿ ಇದೀಗ ಸರ್ಕಾರ ಹೆಜ್ಜೆಯಿಟ್ಟಿದೆ. ಇದಕ್ಕಾಗಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತಾಗಿ ಚರ್ಚಿಸಿ ನೀಲನಕಾಶೆ ಸಿದ್ಧಪಡಿಸಲು ಏಪ್ರಿಲ್​ 16ರಂದು ಸಭೆ ಕರೆಯಲಾಗಿದೆ.

Gangavathi
ಸೂಚನಾ ಪತ್ರ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ, ಪ್ರವಾಸೋದ್ಯಮ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಸಿ.ಪಿ. ಯೋಗೇಶ್ವರ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Gangavathi
ಸೂಚನಾ ಪತ್ರ

ರಾಜ್ಯದ ನಾನಾ ಜಿಲ್ಲೆ ಸೇರಿದಂತೆ ದೇಶದ ಹಲವು ರಾಜ್ಯಗಳಿಂದ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅಗತ್ಯ ಸೌಲಭ್ಯಗಳಾದ ಶೌಚಾಲಯ, ವಸತಿ, ಕುಡಿಯುವ ನೀರು ಸೇರಿದಂತೆ ಇತರ ಅಗತ್ಯ ಸೌಕರ್ಯ ಹಾಗೂ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸಭೆ ಆಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.