ಗಂಗಾವತಿ : ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಚಿಕಿತ್ಸೆಗಾಗಿ ಅನ್ಯ ಜಿಲ್ಲೆ, ತಾಲೂಕಿನಿಂದ ಬಂದಿದ್ದ ರೋಗಿಗಳೊಂದಿಗೆ ನೇರ ಸಂವಾದ ನಡೆಸಿ ಮಾಹಿತಿ ಪಡೆದರು. ಮೂರನೇ ಬಾರಿಗೆ ಕೇಂದ್ರದ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡು ರಾಜ್ಯದಲ್ಲಿಯೇ ದಾಖಲೆ ನಿರ್ಮಾಣ ಮಾಡಿದ ಹಿನ್ನೆಲೆ ಭೇಟಿ ನೀಡಿದ ಸಚಿವ ಸಿಂಗ್, ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ರೌಂಡ್ಸ್ ನಡೆಸಿದರು.
ಆಸ್ಪತ್ರೆಯಲ್ಲಿನ ಚಿಕಿತ್ಸೆ, ಗುಣಮಟ್ಟ ಇತ್ಯಾದಿಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿದರು. ಕೊಪ್ಫಳ ಮಾತ್ರವಲ್ಲ ಇಡೀ ರಾಜ್ಯಕ್ಕೆ ಆಸ್ಪತ್ರೆ ಮಾದರಿಯಾಗಿದ್ದು, ಆದಷ್ಟು ತ್ವರಿತವಾಗಿ ಹೊಸಪೇಟೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಗಂಗಾವತಿಗೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಯತ್ನಿಸುತ್ತೇವೆ ಎಂದರು.
ಇದನ್ನೂ ಓದಿ: ಕೋವಿಡ್ 4ನೇ ಅಲೆ ಆತಂಕ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ