ETV Bharat / state

ಈಶ್ವರಪ್ಪ, ಸಿದ್ದರಾಮಯ್ಯ ಇಬ್ಬರೂ ಮದಗಜಗಳಿದ್ದಂತೆ: ಸಚಿವ ಬಿ.ಸಿ.ಪಾಟೀಲ್ - minister bc patil about siddaramaiah and eshwarappa

ರಾಜ್ಯದಲ್ಲಿಯೂ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿದೆ. ಜನರು ಇದನ್ನು ಅರ್ಥ ಮಾಡಿಕೊಂಡು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಂತ್ರಣದ ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

minister bc patil about siddaramaiah and eshwarappa
ಸಚಿವ ಬಿ.ಸಿ. ಪಾಟೀಲ್
author img

By

Published : Apr 16, 2021, 1:07 PM IST

ಕೊಪ್ಪಳ: ಕೆ.ಎಸ್.ಈಶ್ವರಪ್ಪ ಹಾಗೂ ಸಿದ್ದರಾಮಯ್ಯ ಇಬ್ಬರೂ ಮದಗಜಗಳಿದ್ದಂತೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಕೊಪ್ಪಳ ತಾಲೂಕಿನ ಗಿಣಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಸಚಿವ ಬಿ.ಸಿ. ಪಾಟೀಲ್

ಇದೇ ವೇಳೆ, ಬೆಳಗಾವಿ ಲೋಕಸಭಾ ಹಾಗೂ ಬಸವಕಲ್ಯಾಣ ಮತ್ತು‌ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿಯೂ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿದೆ. ಜನರು ಇದನ್ನು ಅರ್ಥ ಮಾಡಿಕೊಂಡು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಂತ್ರಣದ ನಿಯಮಗಳನ್ನು ಪಾಲಿಸಿ ಸಹಕರಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಲಾಕ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜನರು ಸಹ ಸಹಕರಿಸಬೇಕು. ಜನರ ಮೇಲೂ ಸಹ ಜವಾಬ್ದಾರಿ ಇದೆ. ಇದನ್ನು‌ ಅರ್ಥ ಮಾಡಿಕೊಂಡು ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಪೊಲೀಸ್​ ಇಲಾಖೆಗೂ ಅಂಟಿದ ಸೋಂಕು; ಹೆಚ್ಚಿದ ಆತಂಕ

ಇಷ್ಟು ದಿನ ಚಿತ್ರರಂಗ, ಮದುವೆ, ಸಭೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಈಗಿನ ಪರಸ್ಥಿತಿ ಅರಿತುಕೊಂಡು ಎಲ್ಲರೂ ಸಹಕರಿಸಬೇಕು. ನಿಯಂತ್ರಣ ಮಾಡುವುದರ ಜೊತೆಗೆ ಅಭಿವೃದ್ಧಿಯ ಕೆಲಸಗಳು ಆಗುತ್ತವೆ. ಆದರೆ ಪರಸ್ಥಿತಿ ಇದೇ ರೀತಿ ಮುಂದುವರೆದರೆ ಮತ್ತು ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ. ಇದೇ 18 ರಂದು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಲಾಕ್ ಡೌನ್ ಮಾಡುವುದು ಸರಿಯಲ್ಲ. ಜನರು ಸಹ ಇದನ್ನು ಅರ್ಥ ಮಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.