ಕೊಪ್ಪಳ: ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯ ಗಂಗಾವತಿ ತಾಲೂಕಿನ ಜೀರಾಳ ಕ್ಯಾಂಪ್ ಸೇರಿದಂತೆ ಗಂಗಾವತಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆಯಿಂದಾಗಿ ನೆಲಕಚ್ಚಿದ ಭತ್ತದ ಬೆಳೆಯನ್ನು ಸಚಿವ ಬಿ.ಸಿ. ಪಾಟೀಲ್ ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಸಚಿವರು ಭೇಟಿ ಹಾಗೂ ಪರಿಶೀಲನೆ ವೇಳೆ ಜನಪ್ರತಿನಿಧಿಗಳು ಸಾಮಾಜಿಕ ಅಂತರ ಮರೆತರು. ಇದೇ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ್ ದಡೇಸಗೂರ್, ಪರಣ್ಣ ಮುನವಳ್ಳಿ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.