ಕುಷ್ಟಗಿ: ಕಾಂಗ್ರೆಸ್ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ವಿರುದ್ದ ವ್ಯಂಗ್ಯವಾಡಿದರು.
ಕುಷ್ಟಗಿಯ ಕನಕ ಭವನದಲ್ಲಿ ಬಿಜೆಪಿ ಪಕ್ಷದಿಂದ ನೂತನವಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರೇ ಇಲ್ಲ, ಈ ಪಕ್ಷಕ್ಕೆ ಕಾಯಂ ರಾಷ್ಟ್ರೀಯ ಅಧ್ಯಕ್ಷರೇ ಇಲ್ಲದಷ್ಟು ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಮೈಸೂರಿನಲ್ಲಿ ಕಾರ್ಪೋರೇಷನ್ ಚುನಾವಣೆಯಲ್ಲಿ ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರತ್ಯೇಕ ಗುಂಪುಗಳಾಗಿ ಇಬ್ಭಾಗವಾಗಿದೆ ಎಂದು ಕುಟುಕಿದರು.
ಸಿದ್ದು- ಡಿಕೆಶಿ ಸುಳ್ಳು ಹೇಳುವುರಲ್ಲಿ ಲೆಕ್ಕವೇ ಇಲ್ಲ..!
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಹೆಚ್ಚು ಸುಳ್ಳುಗಳನ್ನು ಹೇಳುತ್ತಿದ್ದು, ಬಿಜೆಪಿಗೆ ಹೆಚ್ಚಿನ ಸ್ಥಾನ ಬಂದಿದೆ ಎಂದರು. ಮೈಸೂರು ಕಾರ್ಪೋರೇಷನ್ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಗುಂಪುಗಳಾಗಿವೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನೇರವಾಗಿ ಬೆತ್ತಲಾಗಿದ್ದು ಸಿದ್ದರಾಮಯ್ಯ ಈಗಾಗಲೇ ರೆಸಾರ್ಟ್ ಸೇರಿದ್ದಾರೆ. ಡಿ.ಕೆ.ಶಿವಕುಮಾರ್ ನನ್ನದೇನೂ ಪಾತ್ರವಿಲ್ಲ ತನ್ವೀರ್ ಸೇಠ್ ಕಡೆ ಬೆರಳು ತೋರಿಸುತ್ತಿದ್ದಾರೆ ಈಶ್ವರಪ್ಪ ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅವರಿಗೆ ಗೋಹತ್ಯೆ ಶಾಪ..!
ಕಾಂಗ್ರೆಸ್ ಅಧಿಕಾರದಲ್ಲಿದಾಗ ಗೋಹತ್ಯೆ ಮಾಡಿದವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ದೂರು ನೀಡಿದವರ ವಿರುದ್ದವೇ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಗೋಹತ್ಯೆ ನಡೆಸಿದವರಿಗೆ ಚುನಾವಣೆಯಲಿ ಈಗಾಗಲೇ ತಕ್ಕ ಶಾಸ್ತಿ ಮಾಡಿದ್ದು, ಗೋವು ಸಂತತಿ ಉಳಿಸಿ ಎನ್ನುವ ಉದ್ದೇಶಕ್ಕಾಗಿ ಜನ ಗ್ರಾ.ಪಂ. ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ ಎಂದರು.