ಕೊಪ್ಪಳ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಬೆಳವಣಿಗೆಗಳು ನಡೆದಿಲ್ಲವೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಚರ್ಚೆ ಯಾಕೆ ಬರುತ್ತೋ ಗೊತ್ತಿಲ್ಲ. ಈಗಂತೂ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮತ್ತೊಂದೆಡೆ ಸಚಿವ ಉಮೇಶ ಕತ್ತಿ ಪ್ರತ್ಯೇಕ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಅವರು ತಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಸೇರಿದ್ದಾರೆ. ನಾವು ಇಂದು ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ ದಡೇಸೂಗೂರು ಸೇರಿದ್ದೆವು. ಹಾಗಂತ ಪ್ರತ್ಯೇಕವಾಗಿ ಸಭೆ ನಡೆಸಿದ್ದೇವೆ ಎಂದಲ್ಲ. ಆಗಾಗ ಸಭೆ ನಡೆಸುತ್ತಾರೆ. ಅಂತಹ ಕಡೆ ನಾನೂ ಹೋಗಿರುತ್ತೇನೆ. ಇದಕ್ಕೆ ಬೇರೆ ಅರ್ಥವಿಲ್ಲ ಎಂದು ಹೇಳಿದರು.
ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಶಾಸಕರಾದ ರೇಣುಕಾಚಾರ್ಯ ಹಾಗು ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿರಿಯ ಸಚಿವರಿಗೆ ಕೊಕ್ ಕೊಡಬೇಕು ಎನ್ನುವ ವಿಚಾರ ಅದು ಅವರ ವೈಯಕ್ತಿಕ ಹೇಳಿಕೆ. ನಮ್ಮದು ರಾಷ್ಟ್ರೀಯ ಪಕ್ಷ. ಸಚಿವ ಸಂಪುಟ ವಿಸ್ತರಣೆ, ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಹಾಗು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಈಗ ಸಚಿವ ಸಂಪುಟ ವಿಸ್ತರಣೆ ವಿಸ್ತರಣೆ ಪ್ರಶ್ನೆಯೇ ಇಲ್ಲ. ಈಗ ಅಭಿವೃದ್ಧಿ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
ಓದಿ: ಉದ್ಘಾಟನೆಯಾಗಿ ವರ್ಷ ಕಳೆದರೂ ಸಾರ್ವಜನಿಕರಿಗೆ ಲಭ್ಯವಾಗದ ಸರ್ಕಾರಿ ಈಜುಕೊಳ