ಕೊಪ್ಪಳ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ, ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ.
ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ ಸಚಿವರನ್ನು ದೇವಸ್ಥಾನದ ಅಧಿಕಾರಿಗಳು ಪೂರ್ಣಕುಂಭದೊಂದಿಗೆ ಸ್ವಾಗತಿಸಿದ್ದಾರೆ.
ಬಳಿಕ ಶ್ರೀ ಹುಲಿಗೆಮ್ಮದೇವಿಗೆ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.