ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯ ಅಂಜನಾದ್ರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.
ಶುಕ್ರವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಅವರು ಅಂಜನಾದ್ರಿಗೆ ಆಗಮಿಸಿದ್ದರು. ಸುಮಾರು 575 ಮೆಟ್ಟಿಲುಗಳಿರುವ ಬೆಟ್ಟವನ್ನೇರಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದುಕೊಂಡರು.
ಬಳಿಕ ಸುಮಾರು 10 ನಿಮಿಷಗಳ ಕಾಲ ಅಂಜನಾದ್ರಿಯ ಪರ್ವತದ ಬಂಡೆಯೊಂದರ ಕೆಳಗೆ ಕುಳಿತು ಸಚಿವ ಸುರೇಶ್ ಕುಮಾರ್ ಧ್ಯಾನ ಮಾಡಿದರು.