ಕುಷ್ಟಗಿ (ಕೊಪ್ಪಳ) : ಪತ್ನಿಯೊಂದಿಗೆ ಮನಸ್ತಾಪ ಮಾಡಿಕೊಂಡ ನೊಂದ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಷ್ಟಗಿ ತಾಲೂಕಿನ ಜುಮ್ಲಾಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೀರಪ್ಪ ದೊಡ್ಡಪ್ಪ ಬಳೂಟಗಿ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮೃತ ಬೀರಪ್ಪ ಹೆಂಡತಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದರಿಂದ ಬಹಳ ನೊಂದುಕೊಂಡಿದ್ದ. ಜಿಗುಪ್ಸೆಯಿಂದ ತಮ್ಮ ಬೀಗರ ಜಮೀನಿನಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ತಾವರಗೇರಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.