ಕುಷ್ಟಗಿ(ಕೊಪ್ಪಳ): ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಮಾಜಿ ಸಿಎಂ ಕುಮಾರಸ್ವಾಮಿ ಉದ್ದೇಶಪೂರ್ವಕವಾಗಿ ಅಭ್ಯರ್ಥಿ ಹಾಕಿದ್ದರು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಆಪ್ತರೊಂದಿಗೆ ಕರೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಪುತ್ರ ಡಾ.ಅಜಯ್ ಕುಮಾರ್ ಸಿಂಗ್ ಇಲ್ಲವೇ ಅವರ ಸಹೋದರ ಚಂದ್ರ ಶೇಖರ್ಗೆ ಟಿಕೆಟ್ ನೀಡುವಂತೆ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಆದರೆ, ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಮಾಲಾ ಅವರಿಗೆ ಪಕ್ಷ ಟಿಕೆಟ್ ನೀಡಿತು ಎಂದು ದೂರವಾಣಿ ಕರೆಯಲ್ಲಿ ಅಮರೇಗೌಡ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇದನ್ನೂ ಓದಿ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗಳಿಸಿದ್ದು.. ಕಳೆದುಕೊಂಡಿದ್ದಿಷ್ಚು..
ಮಸ್ಕಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ. ಕ್ಷೇತ್ರದ ಮತದಾರರು ಹಣದ ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವುದಕ್ಕೆ, ಸಿದ್ದರಾಮಯ್ಯ ಅವರು ಫೋನ್ ಮಾಡಿ ನಮ್ಮನ್ನು, ಹಂಪನಗೌಡ ಬಾದರ್ಲಿ, ಬೋಸರಾಜ್ ಅವರನ್ನು ಶ್ಲಾಘಿಸಿದ್ದಾರೆ. ಅದಕ್ಕೆ ನಾನು ನಿಮ್ಮ ವರ್ಚಸ್ಸು ಕಾರಣ ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ ಎಂದು ಶಾಸಕ ಅಮರೇಗೌಡ ಹೇಳಿದ್ದಾರೆ.