ಕೊಪ್ಪಳ: ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಡೇಸೂಗೂರು ಸಖತ್ ಡ್ಯಾನ್ಸ್ ಮಾಡಿದ್ದಾರೆ.
ನಿನ್ನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದ ಕನಕಗಿರಿ ತಾಲೂಕ ಮೊದಲ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಜನರೊಂದಿಗೆ ವಾದ್ಯಗಳ ತಾಳಕ್ಕೆ ತಕ್ಕಂತೆ ಶಾಸಕ ಬಸವರಾಜ ದಡೇಸೂಗೂರು ಡ್ಯಾನ್ಸ್ ಮಾಡಿದ್ದಾರೆ.
ಸಮ್ಮೇಳನದ ಸರ್ವಾಧ್ಯಕ್ಷರಾದ ಹುಸೇನದಾಸರನ್ನು ಕಲ್ಮಠದಿಂದ ನಡೆದ ಸಮ್ಮೇಳನದ ಮೆರವಣಿಗೆ ಮುಖ್ಯ ವೇದಿಕೆವರೆಗೂ ಮೆರವಣಿಗೆ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ವಿವಿಧ ವಾದ್ಯಮೇಳ, ಜಾನಪದ ಕಲಾತಂಡಗಳು ಭಾಗವಹಿಸಿದ್ದವು.
ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಬಸವರಾಜ ದಡೇಸೂಗೂರು ಜನರೊಂದಿಗೆ ಜೊತೆಗೂಡಿ ಕುಣಿದು ಕುಪ್ಪಳಿಸುವ ಮೂಲಕ ಮೆರವಣಿಗೆಗೆ ಮತ್ತಷ್ಟು ರಂಗು ನೀಡಿ ಹುರಿದುಂಬಿಸಿದರು.