ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ಟಕ್ಕಳಕಿ ಹಾಗೂ ಬಿಜಕಲ್ ಗ್ರಾಮಗಳ ಕಂಟೈನ್‌ಮೆಂಟ್ ಪ್ರದೇಶಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಕುಷ್ಟಗಿ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅನ್ಯ ರಾಜ್ಯ, ಜಿಲ್ಲೆಗಳಿಂದ ಬಂದವರಲ್ಲಿ ಹೆಚ್ಚಾಗಿ ಕೊರೊನಾ ದೃಢಪಟ್ಟಿದೆ. ಸೋಂಕಿತ ಪ್ರದೇಶಗಳಿಗೆ ಹೋಗಿ ಬಂದವರು ಆರೋಗ್ಯ ಇಲಾಖೆ ನಿಯಮ ಪಾಲಿಸಬೇಕು. ಯಾವುದೇ ಕೊರೊನಾ ಲಕ್ಷಣಗಳು ಇಲ್ಲದೇ ಹೋದರು ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿವೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯ ಸಂಚರಿಸದಂತೆ ಸ್ವಯಂ ನಿರ್ಬಂಧಿಸಿಕೊಳ್ಳಬೇಕಿದೆ ಎಂದರು.