ಗಂಗಾವತಿ: ನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಜನ ಹಾಗೂ ವರ್ತಕರು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ಗೆ ಸಹಕರಿಸುವಂತೆ ಅರಿವು ಮೂಡಿಸಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ತಮ್ಮ ಮನೆಯಲ್ಲಿಯೇ ನಗರಸಭೆ, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ಸಂಜೆ 4 ಗಂಟೆ ಬಳಿಕ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವರ್ತಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಗರಸಭೆ ಹಾಗೂ ಪೊಲೀಸ್ ಇಲಾಖೆಯಿಂದ ಆಗಬೇಕು ಎಂದರು.
ನಗರದಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದಕ್ಕೆ ಸ್ವಯಂಪ್ರೇರಿತ ಲಾಕ್ಡೌನ್ ಅಗತ್ಯ ಎಂದರು.
ಸಭೆಯಲ್ಲಿ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ, ತಹಶೀಲ್ದಾರ್ ಎಲ್. ಡಿ. ಚಂದ್ರಕಾಂತ, ತಾಲೂಕು ಪಂಚಾಯತ್ ಇಒ ಡಾ.ಮೋಹನ್, ಸೆರಿದಂತೆ ಇತರರು ಇದ್ದರು.