ಗಂಗಾವತಿ: ಮುಂದಿನ ತಿಂಗಳು ನಡೆಯಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ನಾಡೋಜ ಪುರಸ್ಕೃತ, ದೂರದರ್ಶನ ಕೇಂದ್ರದ ವಿಶ್ರಾಂತ ನಿರ್ದೇಶಕ ಮಹೇಶ ಜೋಶಿಯನ್ನು ಬಿಜೆಪಿಯಿಂದ ಅಧಿಕೃತವಾಗಿ ಬೆಂಬಲಿಸಲಾಗುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಈ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಕಸಾಪದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಡಾ. ಮಹೇಶ್ ಜೋಶಿಯನ್ನು ಬೆಂಬಲಿಸಬೇಕೆಂದು ಪಕ್ಷ ನಿರ್ಣಯ ಕೈಗೊಂಡಿದೆ. ಈ ಹಿನ್ನೆಲೆ ಪಕ್ಷದ ಎಲ್ಲ ಕಾರ್ಯಕರ್ತರು, ನಾಯಕರಿಗೆ ಪಕ್ಷದ ಅಧಿಕೃತ ಸಂದೇಶ ರವಾನಿಸಲಾಗಿದೆ ಎಂದರು.
ಕಸಾಪದ ಅಜೀವ ಸದಸ್ಯತ್ವ ಹೊಂದಿರುವ ಮತದಾರರಾಗಿರುವ ನಮ್ಮ ಪಕ್ಷದ ಕಾರ್ಯಕರ್ತರು ಕಡ್ಡಾಯವಾಗಿ ಮಹೇಶ್ ಜೋಶಿಯನ್ನು ಬೆಂಬಲಿಸಬೇಕು ಎಂದು ಈಗಾಗಲೇ ನಿರ್ದೇಶನ ನೀಡಿದೆ. ಜಿಲ್ಲಾ ಹಂತದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುವುದು ಕಾರ್ಯಕರ್ತರ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿಸಿದರು.
ಓದಿ: ಜಿಲ್ಲೆಗೆ ಸಚಿವ ಸ್ಥಾನ ಕೊಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬೇರೇನೇ ಪರಿಣಾಮ ಬೀರಲಿದೆ: ಶಾಸಕ ಯತ್ನಾಳ್