ಗಂಗಾವತಿ(ಕೊಪ್ಪಳ): ತಾಲೂಕಿನ ಅಂಜನಾದ್ರಿಯನ್ನು ವಿಶ್ವದರ್ಜೆಯ ಧಾರ್ಮಿಕ ತಾಣವನ್ನಾಗಿ ಬದಲಿಸುವ ನಿಟ್ಟಿನಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಲು ಒಮ್ಮೆ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಅವರಿಗೆ ಮನವಿ ಸಲ್ಲಿಸಲಾಗಿದೆ. ಜುಲೈ 15ರೊಳಗೆ ಬಸವರಾಜ ಬೊಮ್ಮಾಯಿ ಅಂಜನಾದ್ರಿಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದಿಂದ ಅಂಜನಾದ್ರಿ ಅಭಿವೃದ್ಧಿಗೆ ಈಗಾಗಲೇ 120 ಕೋಟಿ ರೂ. ಮಂಜೂರಾಗಿದೆ. ಕೇಂದ್ರದಿಂದಲೂ 100 ಕೋಟಿ ರೂಪಾಯಿ ಮೊತ್ತದ ಅನುದಾನವನ್ನು ಹೆಚ್ಚುವರಿಯಾಗಿ ಕಲ್ಪಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಸಿಎಂ ಶೀಘ್ರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
ಸದ್ಯಕ್ಕೆ ಮುಖ್ಯಮಂತ್ರಿಗಳ ಆಶಯದಂತೆ ಅಂಜನಾದ್ರಿ ಬೆಟ್ಟದಲ್ಲಿ ಸುಸಜ್ಜಿತವಾದ ಹೆಲಿಪ್ಯಾಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸುವಂತೆ ಸಲಹೆ ನೀಡಿದ್ದಾರೆ. ಜೊತೆಗೆ ದೇವಸ್ಥಾನಕ್ಕೆ ಆಗಮಿಸುವ ದೇಶ -ವಿದೇಶಗಳ ಪ್ರಯಾಣಿಕರಿಗೆ ಹಾಗೂ ಭಕ್ತರಿಗೆ ಸಮರ್ಪಕವಾದ ರಸ್ತೆಯ ಅವಶ್ಯಕತೆಯಿದೆ.
ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯುತ್ತದೆ: ಹಿಟ್ನಾಳ್ ಕ್ರಾಸ್ನಿಂದ ಗಂಗಾವತಿಯ ಸಾಯಿಬಾಬಾ ದೇವಸ್ಥಾನದವರಿಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಳಿದಂತೆ ವಾಹನ ನಿಲುಗಡೆಗಾಗಿ ಸುಸಜ್ಜಿತವಾದ ಪಾರ್ಕಿಂಗ್ ವ್ಯವಸ್ಥೆ ಮತ್ತಿತರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯುತ್ತದೆ ಎಂದು ಶಾಸಕರಾದ ಪರಣ್ಣ ಮುನವಳ್ಳಿ ಹೇಳಿದರು.
ಹಿಟ್ನಾಳ ಕ್ರಾಸ್ನಿಂದ ಗಂಗಾವತಿಯ ಸಾಯಿಬಾಬಾ ದೇವಸ್ಥಾನದವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಳಿದಂತೆ ವಾಹನ ನಿಲುಗಡೆಗಾಗಿ ಸುಸಜ್ಜಿತವಾದ ಪಾರ್ಕಿಂಗ್ ವ್ಯವಸ್ಥೆ ಮತ್ತಿತರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯುತ್ತದೆ ಎಂದು ಶಾಸಕ ಮುನವಳ್ಳಿ ಹೇಳಿದರು.
ಸಿಎಂ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಅಂಜನಾದ್ರಿ ಅಭಿವೃದ್ಧಿಯ ವಿಚಾರವಾಗಿ ಹಲವಾರು ನಿರ್ಣಯ ಕೈಗೊಂಡಿದ್ದು ಸ್ವಾಗತಾರ್ಹವೆ. ಆದರೂ ಹೆಲಿಪ್ಯಾಡ್ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಬಿಜೆಪಿ ಮುಖಂಡ ಭೂನ್ಯಾಯ ಮಂಡಳಿ ಸದಸ್ಯ ಎನ್. ಪದ್ಮನಾಭರಾಜು ವಿರೋಧ ವ್ಯಕ್ತಪಡಿಸಿದ್ದಾರೆ.
ಅಂಜನಾದ್ರಿಯಲ್ಲಿ ಹೆಲಿಪ್ಯಾಡ್ ಸೂಕ್ತವಲ್ಲ: ಬಿಜೆಪಿ ಮುಖಂಡ ವಿರೋಧ ಸಿಎಂ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಅಂಜನಾದ್ರಿ ಅಭಿವೃದ್ಧಿಯ ವಿಚಾರವಾಗಿ ಹಲವಾರು ನಿರ್ಣಯ ಕೈಗೊಂಡಿದ್ದು ಸ್ವಾಗತಾರ್ಹ. ಆದರೂ ಹೆಲಿಪ್ಯಾಡ್ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಬಿಜೆಪಿ ಮುಖಂಡ ಭೂನ್ಯಾಯ ಮಂಡಳಿ ಸದಸ್ಯ ಎನ್. ಪದ್ಮನಾಭರಾಜು ವಿರೋಧ ವ್ಯಕ್ತಪಡಿಸಿದ್ದಾರೆ.
ಅಭಿವೃದ್ದಿ ನೆಪದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವ, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಅಂಜನಾದ್ರಿ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿದ್ದಲ್ಲದೇ, ಮುಂದಿನ ಜುಲೈ 15ರೊಳಗೆ ಸ್ಥಳಕ್ಕೆ ಆಗಮಿಸಿ ಖುದ್ದಾಗಿ ಅಭಿವೃದ್ಧಿ ಕಾರ್ಯ ಪರಿಶೀಲಿಸುವುದಾಗಿ ತಿಳಿಸಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರದ ಹೆಲಿಪ್ಯಾಡ್ ನಿರ್ಮಾಣದ ಈ ನಿರ್ಧಾರದಿಂದ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಲಿದೆ. ಮೂಲ ಸೌಲಭ್ಯ ಕಲ್ಪಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಕೈಗೊಳ್ಳಲಿ. ಆದರೆ, ಅಭಿವೃದ್ಧಿ ನೆಪದಲ್ಲಿ ಧಾರ್ಮಿಕ ಭಾವನೆಗೆ ದಕ್ಕೆ ತರುವುದು ಸೂಕ್ತವಲ್ಲ ಎಂದಿದ್ದಾರೆ.
ಪಾದಚಾರಿ ಭಕ್ತಾದಿಗಳಿಗೆ ಘಾಸಿ: ಇದರಿಂದ ಅಂಜನಾದ್ರಿಗೆ ಧನಿಕ ಭಕ್ತರಷ್ಟೇ ಅಲ್ಲದೆ ಸಿನಿಮಾ ಚಿತ್ರೀಕರಣದ ಹೆಸರಿನಲ್ಲಿ ವಿವಿಧ ಮನರಂಜನಾ ತಂಡಗಳು ಬೆಟ್ಟಕ್ಕೆ ದಾಂಗುಡಿ ಇಡಲಿವೆ. ಇದರಿಂದ ಜೈ ಶ್ರೀರಾಮ್, ಜೈ ಹನುಮಾನ್ ಎಂಬ ಉದ್ಘೋಷ ಹಾಕುತ್ತ ಭಕ್ತಿ ಪರವಶತೆಯಲ್ಲಿ ಬೆಟ್ಟ ಏರುವ ಪಾದಚಾರಿ ಭಕ್ತಾದಿಗಳಿಗೆ ಘಾಸಿಯಾಗಲಿದೆ. ಅಲ್ಲದೇ ಬೆಟ್ಟದ ಪಾವಿತ್ರತೆಗೆ ಧಕ್ಕೆಯಾಗಲಿದೆ. ಅಂಜನಾದ್ರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೋಪ್ ವೇ ಮತ್ತು ಹೆಲಿಪ್ಯಾಡ್ ನಿರ್ಮಾಣದ ಕಾರ್ಯ ಕೈಬಿಟ್ಟು ಪರ್ಯಾಯ ವ್ಯವಸ್ಥೆಯಡಿ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಪದ್ಮನಾಭರಾಜು ಒತ್ತಾಯಿಸಿದ್ದಾರೆ.