ಕೊಪ್ಪಳ: ಮಹಾಮಾರಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಸಿಎಂ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ನೀಡುವುದಾಗಿ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಪ್ಪ ಆಚಾರ್ ಘೋಷಿಸಿದ್ದಾರೆ.
ಈ ಕುರಿತಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ತಮ್ಮ ಒಂದು ತಿಂಗಳ ವೇತನ ನೀಡುವುದಾಗಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ನಷ್ಟವಾಗಲಿದೆ. ಇಂತಹ ಸಂದರ್ಭದಲ್ಲಿ ನಾವು ಸರ್ಕಾರದೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.