ಕೊಪ್ಪಳ: ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಹುಲಗಿಯ ಹುಲಿಗೆಮ್ಮದೇವಿ ದೇಗುಲದಲ್ಲಿ ಸಾರ್ವಜನಿಕ ದರ್ಶನವನ್ನು ಜ.31ರವರಗೆ ನಿಷೇಧಿಸಲಾಗಿದೆ. ಆದರೂ ಹುಣ್ಣಿಮೆ ನಿಮಿತ್ತ ಭಕ್ತ ಸಾಗರವೇ ಹರಿದು ಬಂದಿತ್ತು.
ಜಿಲ್ಲಾಡಳಿತ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜ.15ರಿಂದ 31ರವರೆಗೆ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿದ್ದು, ದೇಗುಲಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ಮಾರ್ಗಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಆದರೆ, ಸಹಸ್ರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ರಸ್ತೆಯಲ್ಲಿಯೇ ತೆಂಗಿನಕಾಯಿ ಒಡೆದು, ಕೈ ಮುಗಿದು ಹೋಗುತ್ತಿದ್ದಾರೆ.
ಇಲ್ಲಿಗೆ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡಿನಿಂದಲೂ ಭಕ್ತರು ಆಗಮಿಸುತ್ತಾರೆ. ಈ ಕಾರಣಕ್ಕೆ ಕೊರೊನಾ ವ್ಯಾಪಕವಾಗಿ ಹರಡುವ ಭೀತಿ ಎದುರಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 27,156 ಕೋವಿಡ್ ಕೇಸ್, 14 ಸಾವು.. ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?