ETV Bharat / state

ಹೊಸಳ್ಳಿಯಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಜ್ವರ: ಆರೋಗ್ಯ ಇಲಾಖೆ ನಿರ್ಲಕ್ಷ್ಯ ಆರೋಪ - people are suffering from Fever

ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲುತ್ತಿದ್ದಾರೆ.

people are suffering from Fever
ಹೊಸಳ್ಳಿಯಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಜ್ವರ..
author img

By

Published : Apr 14, 2021, 2:50 PM IST

ಗಂಗಾವತಿ: ತಾಲೂಕಿನ ವೆಂಕಟಗಿರಿ ಹೋಬಳಿಯ ಗಡ್ಡಿ ಮತ್ತು ಬಂಡ್ರಾಳ್ ಗ್ರಾಮದ ಜನರಲ್ಲಿ ಕಾಣಿಸಿಕೊಂಡ ಸಾಮೂಹಿಕ ಜ್ವರದ ಸಮಸ್ಯೆ ಇದೀಗ ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿಯ ಹೊಸಳ್ಳಿ ಗ್ರಾಮದಲ್ಲಿಯೂ ಕಾಣಿಸಿಕೊಂಡಿದೆ. ಒಂದೇ ಗ್ರಾಮದಲ್ಲಿನ ಸುಮಾರು 50ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲುತ್ತಿದ್ದಾರೆ.

ಹೊಸಳ್ಳಿಯಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಜ್ವರ..

ಕಳೆದ 3 ದಿನಗಳ ಹಿಂದೆ ಗ್ರಾಮದ ಒಂದಿಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಬಹುತೇಕರು ಹೆಚ್ಚುತ್ತಿರುವ ತಾಪಮಾನಕ್ಕೆ ಜ್ವರ ಕಾಣಿಸಿಕೊಂಡಿರಬಹುದು ಎಂದು ಭಾವಿಸಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಜ್ವರದ ಬಾಧೆಗೆ ಒಳಗಾಗುತ್ತಿರುವವರ ಸಂಖ್ಯೆ 50ರ ಗಡಿ ದಾಟಿದೆ. ಬಹುತೇಕರು ನಗರದ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಗರದ ನೀಲಕಂಠೇಶ್ವರ ವೃತ್ತದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ 10ಕ್ಕೂ ಹೆಚ್ಚು ಮಂದಿ ಒಂದೇ ದಿನ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗ್ರಾಮದಲ್ಲಿನ ಜನರಿಗೆ ಸಾಮೂಹಿಕವಾಗಿ ಏಕೆ ಜ್ವರ ಕಾಣಿಸಿಕೊಳ್ಳುತ್ತಿದೆ ಎಂಬುವುದರ ಬಗ್ಗೆ ಗ್ರಾಮಸ್ಥರಿಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆಯಾಗಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿಯಾಗಲಿ ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಓದಿ: ಗಂಗಾವತಿಯ ಕೆಲ ಗ್ರಾಮಗಳ ಜನರಿಗೆ ಜ್ವರ, ತಲೆನೋವು: ಆರೋಗ್ಯ ಇಲಾಖೆ ನಿರ್ಲಕ್ಷ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.