ETV Bharat / state

ಮೋದಿ ತೆಗೆದುಕೊಂಡ ನಿರ್ಧಾರಗಳು ವಿಶ್ವವ್ಯಾಪಿ ಮೆಚ್ಚುಗೆ.. ಸಂಸದ ಸಂಗಣ್ಣ ಕರಡಿ - 20 lakhs corona package

ಪೌರತ್ವ ತಿದ್ದುಪಡಿ ಕಾಯ್ದೆ, 370ನೇ ಕಲಂ ರದ್ಧತಿ, ಜಿಎಸ್​​​ಟಿ ಸೇರಿ ಅನೇಕ ಮಹತ್ವದ ನಿರ್ಧಾರಗಳಿಂದ ಮೋದಿ ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

MP Sanganna karadi addressing to media
ಸಂಸದ ಸಂಗಣ್ಣ ಕರಡಿ
author img

By

Published : Jun 2, 2020, 8:51 PM IST

ಕೊಪ್ಪಳ : ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತೆಗೆದುಕೊಂಡ ನಿರ್ಧಾರಗಳು ವಿಶ್ವವ್ಯಾಪಿ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಸಂಸದ ಸಂಗಣ್ಣ ಕರಡಿ ಬಣ್ಣಿಸಿದರು.

ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2ನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸೀಲ್​ಡೌನ್​,ಲಾಕ್​ಡೌನ್ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ತೊಂದರೆಯಾಗಿತ್ತು. ಹೀಗಾಗಿ ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಸರ್ಕಾರ ₹20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿತು. ಮೋದಿ ಅವರ ಅನೇಕ ದಿಟ್ಟ ಕ್ರಮಗಳಿಂದ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದು ಬಣ್ಣಿಸಿದರು.

ಸಂಸದ ಸಂಗಣ್ಣ ಕರಡಿ

ಪೌರತ್ವ ತಿದ್ದುಪಡಿ ಕಾಯ್ದೆ, 370ನೇ ಕಲಂ ರದ್ಧತಿ, ಜಿಎಸ್​​​ಟಿ ಸೇರಿ ಅನೇಕ ಮಹತ್ವದ ನಿರ್ಧಾರಗಳಿಂದ ಮೋದಿ ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಕೊಪ್ಪಳದಲ್ಲಿ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿದೆ. ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆಗಳು, ಹೆದ್ದಾರಿ, ಕೇಂದ್ರೀಯ ವಿದ್ಯಾಲಯ.. ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದ ಅವರು, ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ ಎದುರಾಗಿದೆ. ಆದರೂ ಕೊರೊನಾ ಜೊತೆ ಬದುಕು ಕಟ್ಟಿಕೊಳ್ಳಬೇಕಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.