ETV Bharat / state

ಯತ್ನಾಳ್​ ವಿರುದ್ಧ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿ: ಸಂಸದ ಸಂಗಣ್ಣ ಕರಡಿ - MLA Basanagouda Patil Yatnal statement

8 ಸಂಸದರಿಗೆ ಟಿಕೆಟ್ ಇಲ್ಲವೆಂದಿರುವ ಶಾಸಕ ಯತ್ನಾಳ್ ಹೇಳಿಕೆಗೆ ಸಂಸದ ಸಂಗಣ್ಣ ಕರಡಿ ಆಕ್ರೋಶ ಹೊರಹಾಕಿದ್ದಾರೆ.

MP Sanganna Karadi Anger Against MLA Yatnal

author img

By ETV Bharat Karnataka Team

Published : Sep 2, 2023, 10:35 PM IST

Updated : Sep 2, 2023, 11:04 PM IST

ಸಂಸದ ಸಂಗಣ್ಣ ಕರಡಿ

ಕೊಪ್ಪಳ: ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿಯ 8 ಜನ ಸಂಸದರಿಗೆ ಟಿಕೆಟ್ ಇಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಸರಿಯಲ್ಲ. ಹೈಕಮಾಂಡ್ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಶನಿವಾರ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವವರು ಯಾರೇ ಆಗಿರಲಿ, ಪಕ್ಷದ ವಿರುದ್ಧವಾಗಿ ಮಾತನಾಡಬಾರದು. ಟಿಕೆಟ್ ವಿಯಷವಾಗಿ ಇನ್ನು ಯಾವುದೇ ಚರ್ಚೆ ನಡೆದಿಲ್ಲ. ಆದರೂ ಇಲ್ಲಸಲ್ಲದ್ದನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಪಕ್ಷದ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶೀಘ್ರವೇ ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ನೇಮಕವಾಗಲಿದೆ: ಮಾಜಿ ಶಾಸಕ ರೇಣುಕಾಚಾರ್ಯ ಪಕ್ಷದ ವಿರುದ್ಧವಾಗಿ ಯಾವ ಕಾರಣಕ್ಕಾಗಿ ಮಾತನಾಡುತ್ತಿದ್ದಾರೆಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಬೇಕು. ಏನೇ ಸಮಸ್ಯೆ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಿದರೆ ಉತ್ತಮ ಎಂದರು.

ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ ಸಭೆಗೆ ರಾಜ್ಯದ ಪ್ರಮುಖ ನಾಯಕರು ಗೈರಾದ ಬಗ್ಗೆ ಮಾತನಾಡಿ, ಅಂದು ಅನ್ಯ ಕಾರ್ಯ ನಿಮಿತ್ತ ನಮ್ಮ ನಾಯಕರು ಸಭೆಯಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಹಾಗಂತ ಅವರನ್ನು ದೂರವಿಟ್ಟಿದ್ದಾರೆಂದಲ್ಲ. ಎಲ್ಲರ ಅಭಿಪ್ರಾಯ ಪಡೆಯಲಿದ್ದಾರೆ. ಶೀಘ್ರವೇ ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಕರಡಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹಳಿ ತಪ್ಪಿದೆ: ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಶಾಸಕ ರಾಯರಡ್ಡಿ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಅವರು ಯಾವ ಪಕ್ಷದವರೇ ಇರಲಿ, ಅಭಿವೃದ್ಧಿಗೆ, ರೈತರಿಗೆ ಸ್ಪಂದಿಸುತ್ತಿದ್ದಾರೆ. ಅವರೊಬ್ಬ ಹಿರಿಯ ನಾಯಕ. ಅವರಿಗೆ ಕಾಂಗ್ರೆಸ್​ನಲ್ಲಿ ಗೌರವ ಇಲ್ಲದಂತಾಗಿದೆ. ಇಂಡಿಯಾ ಹೆಸರಿನಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಆದರೆ, ಅವರಲ್ಲಿ ಹೊಂದಾಣಿಕೆ ಇಲ್ಲ. ಯಾರನ್ನು ಪ್ರಧಾನಿ ಅಭ್ಯರ್ಥಿ ಮಾಡಬೇಕೆಂಬ ಗೊಂದಲವಿದೆ. ರಾವಣನಿಗೆ ಹತ್ತು ತಲೆ ಇದ್ದಂತೆ, ಇಲ್ಲಿ ಯಾರು ಪ್ರಮುಖರು ಎಂಬ ಗೊಂದಲ ಶುರುವಾಗಿದೆ. ಹೊಂದಾಣಿಕೆ ಇಲ್ಲದೆ ಅದೊಂದು ಕಿಚಡಿ ಪಾರ್ಟಿಯಾಗಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳಿಂದ ಲೋಕಸಭೆ ಟಿಕೆಟ್ ಗಿಟ್ಟಿಸಲು ಭಗೀರಥ ಪ್ರಯತ್ನ

ರೇಣುಕಾಚಾರ್ಯ ಅವರು ಲೋಕಸಭಾ ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ದಾವಣಗೆರೆ ಲೋಕಸಭೆಗೆ ಅಲ್ಲಿನ ಸಂಸದರು ನಿಲ್ಲಲ್ಲ ಅಂತಿದ್ದಾರೆ. ಹಾಗಾಗಿ ಟಿಕೆಟ್ ಕೇಳಿದ್ದಾರೆ. ಶಿವಕುಮಾರ್ ಉದಾಸಿ ಸೇರಿದಂತೆ ಕೆಲವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಸಹಜವಾಗಿ ಟಿಕೆಟ್ ಕೇಳಿದ್ದಾರೆ, ಅದರಲ್ಲಿ ತಪ್ಪೇನು?. ಅವರಿಗೆ ಅಧಿಕಾರ ಹಕ್ಕು ಎರಡೂ ಇದೆ. ಟಿಕೆಟ್ ಸಿಗುತ್ತದೆ ಅಂದರೆ ಹೋರಾಟ ಮಾಡಲಿ ಎಂದು ಯತ್ನಾಳ್​ ಇತ್ತೀಚೆಗೆ ಹೇಳಿಕೆ ನೀಡಿದ್ದರು.

Last Updated : Sep 2, 2023, 11:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.