ETV Bharat / state

ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ:  ಸ್ಥಳಕ್ಕೆ ಭೇಟಿ ನೀಡಿದ ಸಂಸದ ಸಂಗಣ್ಣ ಕರಡಿ - ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ

ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ರೂಪಿಸಿದೆ. ಸೋಂಕು ಹರಡದಂತೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕಿದೆ.

MP Sanganna karadi
ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ
author img

By

Published : May 8, 2020, 5:40 PM IST

ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆ ಮೂಲಕ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಇಂದು ಭೇಟಿ ನೀಡಿ ಪರಿಶೀಲಿಸಿದರು.

ಈ ಕಾಮಗಾರಿಯಲ್ಲಿ 780 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕುರಿತಂತೆ ಸಂಸದರು ಮಾಹಿತಿ ಪಡೆದುಕೊಂಡರು. ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ರೂಪಿಸಿದೆ. ಸೋಂಕು ಹರಡದಂತೆ ಪ್ರತಿಯೊಬ್ಬರು ಜಾಗೃತಿವಹಿಸಬೇಕಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು ಹಾಗೂ ಸರ್ಕಾರ ರೂಪಿಸಿರುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಸಂಸದರು ಇದೇ ವೇಳೆ ಕರೆ ನೀಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.