ಕೊಪ್ಪಳ : ದ್ವಿಚಕ್ರವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸಂಸದ ಸಂಗಣ್ಣ ಕರಡಿ ಸಹೋದರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಸವರಾಜ ಕರಡಿ (58) ಸ್ಥಳದಲ್ಲಿಯೇ ಸಾವಿಗೀಡಾದವರು.
ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತ ಬಸವರಾಜ ಕರಡಿ ಅವರು ಕೊಪ್ಪಳದಿಂದ ಟಣಕನಕಲ್‌ಗೆ ಹೋಗುತ್ತಿದ್ದರು. ಯಲಮಗೇರಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.