ಗಂಗಾವತಿ: ಮೇಲ್ವರ್ಗ ಸೇರಿದಂತೆ ಅಗತ್ಯವಿರುವ ಜಾತಿಗಳಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೀಸಲಾತಿ ನೀಡಿದ್ದು, ಇದೇ ಮೈಲೇಜ್ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಣ್ಣ ಕೈಗಾರಿಕೆ ಮತ್ತು ನಗರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮತ್ತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಯಾವ ಸಮುದಾಯಕ್ಕೆ ಮೀಸಲಾತಿ ಹಂಚಿಕೆ ಮಾಡಬೇಕು ಎಂಬುವುದರ ಬಗ್ಗೆ ಕೇಂದ್ರಕ್ಕೆ ಸ್ಪಷ್ಟ ಕಲ್ಪನೆಯಿದೆ. ಯಾವ ಸಮುದಾಯಕ್ಕೂ ಅನ್ಯಾಯಾವಾಗದಂತೆ ಹಾಗೂ ಪಾರದರ್ಶಕವಾಗಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಬಿಜೆಪಿ ಸರ್ಕಾರ ಮಾಡಲಿದೆ.
ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಕ್ಕೆ ನನ್ನ ಕಾರ್ಯಕರ್ತರಿಗೆ ಅಸಮಧಾನವಿದ್ದುದ್ದಕ್ಕೆ ಉಪ ಚುನಾವಣೆಯಲ್ಲಿ ಸೋಲಾಗಿತ್ತು. 35 ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದೆ. ಆ ನೋವು ಕಾರ್ಯಕರ್ತರಿಗೆ ಆಗಿರಬೇಕು ಎಂದರು. ಅಲ್ಲದೇ ಮುಂದಿನ ಚುನಾವಣೆ ಕೇವಲ ಬಿಜೆಪಿಯಿಂದ ಮಾತ್ರ ಸ್ಪರ್ಧೆ ಮಾಡುವುಗಾಗಿ ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ದೇವೇಗೌಡರ ಮಾತಿಗೆ ಮಣಿದ ಮಧುಗಿರಿ ಶಾಸಕ.. ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದವರು ಯೂಟರ್ನ್