ಕೊಪ್ಪಳ: ಚುನಾವಣೆ ನಡೆದು 6 ತಿಂಗಳ ಬಳಿಕ ಅಧ್ಯಕ್ಷ-ಉಪಾಧ್ಯಕ್ಷರ ಹೆಸರು ಅಧಿಕೃತವಾಗಿ ಘೋಷಣೆಯಾದ ಬಳಿಕ ಅಧ್ಯಕ್ಷರಾಗಿ ಲತಾ ಗವಿಸಿದ್ದಪ್ಪ ಚಿನ್ನೂರು ಹಾಗೂ ಉಪಾಧ್ಯಕ್ಷರಾಗಿ ಜರೀನಾಬೇಗಂ ಅರಗಂಜಿ ಪದಗ್ರಹಣ ಮಾಡಿದರು.
ಎಸಿ ನಾರಾಯಣ ರೆಡ್ಡಿ ಸೇರಿದಂತೆ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು. ಬಳಿಕ ಲತಾ ಗವಿಸಿದ್ದಪ್ಪ ಚಿನ್ನೂರು ಹಾಗೂ ಜರೀನಾ ಬೇಗಂ ಅರಗಂಜಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಪದಗ್ರಹಣ ಮಾಡಿದರು.
ಬಳಿಕ ಮಾತನಾಡಿದ ಅಧ್ಯಕ್ಷೆ ಲತಾ ಚಿನ್ನೂರು, ನಗರಸಭೆ ಅಧಿಕಾರಿಗಳು, ಶಾಸಕರು ಹಾಗೂ ಸದಸ್ಯರ ಸಹಕಾರದೊಂದಿಗೆ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಈಗ ಕೊರೊನಾ ಸೋಂಕು ಹರಡುತ್ತಿರುವುದರಿಂದ ಇದನ್ನು ತಡೆಗಟ್ಟುವುದಕ್ಕೆ ನಗರಸಭೆಯು ಮೊದಲ ಅದ್ಯತೆ ನೀಡಲಿದೆ ಎಂದರು.