ETV Bharat / state

ದೇವಸ್ಥಾನಕ್ಕೆ ಹೋಗುವಾಗ ದಾಳಿ: ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆ - ಜಗನ್ ಮೋಹನ್ ಹತ್ಯೆ

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗನಾಗಿದ್ದ, ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

Municipality Standing Committee Chairman Murder
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್
author img

By

Published : Jun 7, 2022, 7:41 AM IST

ಕೋಲಾರ: ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿ‌ ನಡೆದಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಕೊಲೆಯಾದವರು.

ಇಂದು ಬೆಳಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತರ ಗುಂಪೊಂದು ಜಗನ್ ಮೋಹನ್ ಅವರ ಮೇಲೆ ದಾಳಿ ಮಾಡಿ ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎನ್ನಲಾಗ್ತಿದೆ.

Municipality Standing Committee Chairman Murder
ಜಗನ್ ಮೋಹನ್ ಮೃತ ದೇಹ

ತೀವ್ರವಾಗಿ ಗಾಯಗೊಂಡಿದ್ದ ಮೋಹನ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಡಿವೈಎಸ್​​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರಲ್ಲಿ ತಲವಾರಿನಿಂದ ಕೊಚ್ಚಿ ರೌಡಿಶೀಟರ್ ಕೊಲೆಗೆ ಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.