ETV Bharat / state

ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಶುರುವಾಗಿದ್ದು ಸಿದ್ದರಾಮಯ್ಯ ಕಾಲದಲ್ಲಿ: ಕಟೀಲ್​ - nalin kumar katil alligation against siddaramaiah

ಬಿಜೆಪಿ ಸರ್ಕಾರ ಬಂದ‌ ಮೇಲೆ ಕಳ್ಳಕಾಕರು ನಿರುದ್ಯೋಗಿಗಳಾಗಿದ್ದಾರೆ. ಕಳ್ಳಕಾಕರು ಎಂದರೆ ಬೇರೆ ಯಾರೂ ಅಲ್ಲ ತಿಹಾರ್​ ಜೈಲಿಗೆ ಹೋಗಿ ಬಂದವರು. ಕಾಂಗ್ರೆಸ್​ನವರೆಲ್ಲರೂ ಭ್ರಷ್ಟಾಚಾರದ ಹಿನ್ನೆಲೆ ಇರುವವರು. ನಮ್ಮ ಸರ್ಕಾರ ಬಂದ ಮೇಲೆ ಇಂದು ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ರಾಜಕೀಯದ ಹೆಸರಿನಲ್ಲಿ ಅವರು ಹಣ ಗಳಿಸಲು ವಿಫಲರಾಗುತ್ತಿದ್ದಾರೆ. ಇಂತಹವರು ಇಂದು ನಿರುದ್ಯೋಗಿಗಳಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ರು.

nalin kumar katil attacks congress leaders
ನಳಿನ್ ಕುಮಾರ್ ಕಟೀಲ್ ಹೇಳಿಕೆ
author img

By

Published : Jan 24, 2021, 12:45 PM IST

ಕೊಪ್ಪಳ: ಬಿಜೆಪಿ ಸರ್ಕಾರ ಬಂದ‌ ಮೇಲೆ ಕಳ್ಳಕಾಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಹೇಳಿಕೆ

ಹೊಸಪೇಟೆಗೆ ತೆರಳುವ ಮಾರ್ಗಮಧ್ಯದಲ್ಲಿ‌ ಕೊಪ್ಪಳದಲ್ಲಿ ಮಾತನಾಡಿದ ಅವರು, ಕಳ್ಳಕಾಕರು ಎಂದರೆ ಬೇರೆ ಯಾರೂ ಅಲ್ಲ, ತಿಹಾರ್​ ಜೈಲಿಗೆ ಹೋಗಿ ಬಂದವರು. ಕಾಂಗ್ರೆಸ್​ನವರೆಲ್ಲರೂ ಭ್ರಷ್ಟಾಚಾರದ ಹಿನ್ನೆಲೆ ಇರುವವರು. ನಮ್ಮ ಸರ್ಕಾರ ಬಂದ ಮೇಲೆ ಇಂದು ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತಾಗಿದೆ. ರಾಜಕೀಯದ ಹೆಸರಿನಲ್ಲಿ ಅವರು ಹಣ ಗಳಿಸಲು ವಿಫಲರಾಗುತ್ತಿದ್ದಾರೆ. ಇಂತಹವರು ಇಂದು ನಿರುದ್ಯೋಗಿಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಇತಿಮಿತಿಯಲ್ಲಿ ಮಾತನಾಡುವಂತೆ ಸೂಚನೆ ನೀಡಲಾಗಿದೆ. ಅವರ ವರ್ತನೆ ಕುರಿತು ದೆಹಲಿಯ ಶಿಸ್ತುಸಮಿತಿಗೆ ತಿಳಿಸಲಾಗಿದೆ. ಪಕ್ಷ ಆಂತರಿಕವಾಗಿ ಚರ್ಚಿಸಿ ಕ್ರಮ ಕೈಗೊಳ್ಳುತ್ತದೆ. ತಮ್ಮ ವರ್ತನೆಯನ್ನು ಸರಿಪಡಿಸುವಂತೆ ಯತ್ನಾಳ್ ಅವರಿಗೆ ಅವಕಾಶ ನೀಡಲಾಗಿದೆ. ಆದರೆ ಸರಿಪಡಿಸಿಕೊಳ್ಳದಿದ್ದರೆ ಅದು ಅವರ ಕರ್ಮ ಎಂದರು.

ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಶುರುವಾಗಿದ್ದು ಸಿದ್ದರಾಮಯ್ಯ ಕಾಲದಲ್ಲಿ. ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಎಂದು ಆರೋಪಿಸಿದ ಕಟೀಲ್, ನಮ್ಮ ಸರ್ಕಾರ ಬಂದ ಮೇಲೆ ಈ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕ್ರಮ ಕೈಗೊಂಡಿದೆ. ಯಾರಿಗೆ ಪರವಾನಿಗೆ ಇದೆಯೋ ಅವರಿಗೆ ಗಣಿಗಾರಿಕೆಗೆ ಅವಕಾಶ ನೀಡಲಾಗುತ್ತದೆ. ಅಕ್ರಮವಿರುವುದನ್ನು ಬಂದ್ ಮಾಡಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ ಎಂದರು.

ನರೇಂದ್ರ ಮೋದಿ ಅವರ ಕಾರ್ಯಗಳನ್ನು ಜಗತ್ತು ಮೆಚ್ಚಿದೆ. ಹಿಂದೆ ಭಾರತ ಎಲ್ಲ ಸಂದರ್ಭದಲ್ಲಿಯೂ ಬೇರೆ ದೇಶದ ಮುಂದೆ ಕೈಚಾಚಬೇಕಿತ್ತು. ಆದರೆ ಮೋದಿ ಅವರ ಶಕ್ತಿಯಿಂದಾಗಿ ನಮ್ಮ ದೇಶ ಇನ್ನೊಂದು ದೇಶಕ್ಕೆ ನೆರವು ನೀಡುವಷ್ಟು ಶಕ್ತಿಯುತವಾಗಿದೆ ಎಂದು ಕಟೀಲ್​ ಸಮರ್ಥಿಸಿಕೊಂಡರು.

ಇದನ್ನೂ ಓದಿ:ಮೂರು ಸಾವಿರ ಮಠದ ಆಸ್ತಿ ನಾಶಕ್ಕೆ ಪ್ರಭಾವಿ ರಾಜಕೀಯ ಮುಖಂಡರ ಕೈವಾಡವಿದೆ: ದಿಂಗಾಲೇಶ್ವರ ಶ್ರೀ ಆರೋಪ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.