ಗಂಗಾವತಿ: ನಾಯಕ ವಾಲ್ಮೀಕಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳವಾಗಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ಮಹಾಸಭಾದ ಗಂಗಾವತಿ ತಾಲೂಕು ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇಲ್ಲಿನ ಮಿನಿ ವಿಧಾನಸೌಧಕ್ಕೆ ತೆರಳಿದ ಸಮುದಾಯದ ಮುಖಂಡರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ, ಕೂಡಲೇ ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸುಮಾರು 70 ಲಕ್ಷ ಜನಸಂಖ್ಯೆಯನ್ನು ನಾಯಕ ವಾಲ್ಮೀಕಿ ಸಮುದಾಯ ಹೊಂದಿದೆ. ಪರಿಶಿಷ್ಟ ಪಂಗಡದಲ್ಲಿನ ಕೇವಲ 3ರಷ್ಟು ಮಾತ್ರ ಮೀಸಲಾತಿ ಸಿಗುತ್ತಿದ್ದು, ಸಮುದಾಯದಲ್ಲಿನ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಮುಖಂಡರು ತಿಳಿಸಿದ್ದಾರೆ.