ETV Bharat / state

SC ಮೀಸಲು ಕ್ಷೇತ್ರ ಎಂಬ ಕಾರಣಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಬಸವರಾಜ ದಢೇಸ್ಗೂರು ಆರೋಪ - MLA Basavaraj Dhadesugur allegation

ಜನರ ಸಮಸ್ಯೆಗಳಿಗೆ, ಕೊಟ್ಟ ಮನವಿಗೆ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸುತ್ತಿಲ್ಲ. ಆರು ತಿಂಗಳು ಕಳೆದರೂ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಸಭೆ ಕರೆದಾಗ ಅಧಿಕಾರಿಗಳು ಕಾಟಾಚಾರಕ್ಕೆ ಕಡತಗಳನ್ನು ತರುತ್ತಾರೆಯೇ ವಿನಃ ಪ್ರಮಾಣಿಕ ಯತ್ನ ಮಾಡುತ್ತಿಲ್ಲ ಎಂದು ದೂರಿದರು..

MLA Basavaraj Dhadesugur allegation
ಶಾಸಕ ಬಸವರಾಜ ದಢೇಸ್ಗೂರು
author img

By

Published : Oct 17, 2021, 9:14 PM IST

ಗಂಗಾವತಿ : ನನ್ನದು ಎಸ್​ಸಿ ಮೀಸಲು ಕ್ಷೇತ್ರ ಎಂಬ ಕಾರಣಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ಅಭಿವೃದ್ಧಿಯ ವಿಚಾರದಲ್ಲಿ ಅಸಹಕಾರ ತೋರುತ್ತಿದ್ದಾರೆ ಎಂದು ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಢೇಸ್ಗೂರು ಗಂಭೀರ ಆರೋಪ ಮಾಡಿದ್ದಾರೆ.

ತಾಲೂಕಿನ ಗುಳದಾಳ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಗ್ರಾಮದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಸಮ್ಮುಖದಲ್ಲಿಯೇ ಶಾಸಕರು ಈ ಬಗ್ಗೆ ಅಧಿಕಾರಿಗಳ ಮೇಲೆ ಆರೋಪ ಮಾಡಿದರು.

ಅಧಿಕಾರಿಗಳ ವಿರುದ್ಧ ಶಾಸಕ ಬಸವರಾಜ ದಢೇಸ್ಗೂರು ಆರೋಪ

ಜನರ ಸಮಸ್ಯೆಗಳಿಗೆ, ಕೊಟ್ಟ ಮನವಿಗೆ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸುತ್ತಿಲ್ಲ. ಆರು ತಿಂಗಳು ಕಳೆದರೂ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಸಭೆ ಕರೆದಾಗ ಅಧಿಕಾರಿಗಳು ಕಾಟಾಚಾರಕ್ಕೆ ಕಡತಗಳನ್ನು ತರುತ್ತಾರೆಯೇ ವಿನಃ ಪ್ರಮಾಣಿಕ ಯತ್ನ ಮಾಡುತ್ತಿಲ್ಲ ಎಂದು ದೂರಿದರು.

ಇದೇ ಗುಳದಾಳ ಗ್ರಾಮದ ಸಮಸ್ಯೆಗಳ ಇತ್ಯರ್ಥಕ್ಕೆ ಕಳೆದ ಆರು ತಿಂಗಳ ಹಿಂದೆಯೇ ಭರವಸೆ ನೀಡಲಾಗಿತ್ತು. ಆದರೆ, ಅಧಿಕಾರಿಗಳು ಸ್ಪಂದಿಸದ ಪರಿಣಾಮ ಇಂದು ಸ್ವತಃ ಜಿಲ್ಲಾಧಿಕಾರಿ ಗ್ರಾಮಕ್ಕೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.