ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಕೆಲ ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 170 ಕ್ವಿಂಟಾಲ್ಗೂ ಅಧಿಕ ಪಡಿತರ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿದೆ.
ತಹಶೀಲ್ದಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ಮಾಡಿ, ಗೊಂಡಬಾಳ ಗ್ರಾಮದ ನಿಂಗಜ್ಜ ಭಜಂತ್ರಿ, ಹನುಮಂತಪ್ಪ ಭಜಂತ್ರಿ, ಪ್ರಭಾಕರ ಭಜಂತ್ರಿ ಹಾಗೂ ಜಾನಪ ಭಜಂತ್ರಿ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನ ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಪಡಿತರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.